07
Oct

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ SIR (Special Intensive Revision)ಹೆಸರಿನಲ್ಲಿ ರಾಜ್ಯಾದ್ಯಂತ ಲಕ್ಷಾಂತರ ಅರ್ಹ ಮತದಾರರ, ವಿಶೇಷವಾಗಿ ದಲಿತ, ಅಲ್ಪಸಂಖ್ಯಾತ, ಬಡ ಮತ್ತು ವಲಸೆ ಕಾರ್ಮಿಕರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ. Form-7 ದುರುಪಯೋಗದ ಮೂಲಕ ನಡೆಯುತ್ತಿರುವ ಈ ಮತ ಕಳ್ಳತನಕ್ಕೆ ಚುನಾವಣಾ ಆಯೋಗವೇ ಕುಮ್ಮಕ್ಕು ನೀಡುತ್ತಿದೆ ಎಂಬ ಗಂಭೀರ ಆರೋಪಗಳಿವೆ.

ಪಕ್ಷಪಾತಿಯಾಗಿ ವರ್ತಿಸುತ್ತಿರುವ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ ಆದ್ದರಿಂದ.

  1. ಪಕ್ಷಪಾತಿ ಚುನಾವಣಾ ಆಯುಕ್ತ ಜ್ಞಾನೇಶ್ ಅವರನ್ನು ಕೂಡಲೇ ವಜಾಗೊಳಿಸಬೇಕು
  2. ಮತದಾರರನ್ನು ವಂಚಿಸುವ SIR ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು

ಈ ನಿಟ್ಟಿನಲ್ಲಿ ಅಕ್ಟೋಬರ್ 8ರಂದು ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಾಗೂ SIR ಕುರಿತು ರಾಜ್ಯಮಟ್ಟದ ಜನತಾ ಅದಾಲತ್ ಅನ್ನು ಆಯೋಜಿಸಲಾಗಿದೆ. ಮತದಾರರ ಪಟ್ಟಿಯಿಂದ ನಿಮ್ಮ ಹೆಸರು ಅಳಿಸಲ್ಪಡುವುದನ್ನು ತಡೆಯಲು, ಸಂವಿಧಾನವನ್ನು ರಕ್ಷಿಸಲು, ಪ್ರಜಾಪ್ರಭುತ್ವವನ್ನು ಉಳಿಸಲು ನೀವೆಲ್ಲರೂ ಸಾವಿರಾರು ಸಂಖ್ಯೆಯಲ್ಲಿ ಈ ಹೋರಾಟದಲ್ಲಿ ಭಾಗವಹಿಸಿ.

ಇದು ನಮ್ಮ ಮತದ ಹಕ್ಕಿಗಾಗಿ ನಡೆಯುವ ಜನತಾ ನ್ಯಾಯಾಲಯ

ಬನ್ನಿ, ಹೋರಾಡೋಣ, ಗೆಲ್ಲೋಣ

~ಅಪ್ಸ‌ರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

SDPIKarnataka

Leave A Comment