ಪತ್ರಿಕಾ ಪ್ರಕಟಣೆ

ಅಕ್ಟೋಬ‌ರ್ 23ರ ಜನತಾ ಮೆರವಣಿಗೆಗೆ ಎಸ್‌ಡಿಪಿಐ ಬೆಂಬಲ ಎಸ್‌ಐಆರ್‌ ರದ್ದುಗೊಳಿಸಿ, ಅರ್ಹ ಮತದಾರರ ಹಕ್ಕುಗಳನ್ನು ಮರುಸ್ಥಾಪಿಸಿ: ಅಬ್ದುಲ್ ಮಜೀದ್‌

ಬೆಂಗಳೂರು, ಅಕ್ಟೋಬರ್ 19: ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕುಗಳ ರಕ್ಷಣೆಗಾಗಿ ಪೀಪಲ್‌ ಅಗೆನೆಸ್ಟ್ ಎಸ್‌ಐಆ‌ರ್ (PA-SIR) ಸಂಘಟನೆ ಅಕ್ಟೋಬರ್ 23ರಂದು ಕರೆ ನೀಡಿರುವ ‘ಪ್ರಜಾಪ್ರಭುತ್ವವನ್ನು ಮರಳಿ ಪಡೆಯಲು ಜನತಾ ಮೆರವಣಿಗೆ’ಗೆ ಎಸ್‌ಡಿಪಿಐ ಕರ್ನಾಟಕ ರಾಜ್ಯ ಸಮಿತಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸುತ್ತದೆ.

ಎಸ್‌ಐಆರ್ ಪ್ರಕ್ರಿಯೆಯ ಹೆಸರಿನಲ್ಲಿ ಅರ್ಹ ನಾಗರಿಕರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗುತ್ತಿದೆ ಎಂಬ ಆತಂಕಗಳ ಹಿನ್ನೆಲೆಯಲ್ಲಿ, ಪಾರದರ್ಶಕ ತನಿಖೆ ನಡೆಸಿ, ಅರ್ಹ ಮತದಾರರ ಹಕ್ಕುಗಳನ್ನು ಮರುಸ್ಥಾಪಿಸಬೇಕು. ಚುನಾವಣಾ ಆಯೋಗವು ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್‌ ಮಜೀದ್‌ ಮೈಸೂರು ಆಗ್ರಹಿಸಿದ್ದಾರೆ.

ಪ್ರಜಾಪ್ರಭುತ್ವದ ರಕ್ಷಣೆಗಾಗಿ ಎಲ್ಲ ರಾಜಕೀಯ ಪಕ್ಷಗಳು, ಜನಪರ ಸಂಘಟನೆಗಳು ಮತ್ತು ನಾಗರಿಕರು ಒಗ್ಗಟ್ಟಿನಿಂದ ಹೋರಾಟದಲ್ಲಿ ಪಾಲ್ಗೊಳ್ಳಬೇಕು. ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ಗೌರವಿಸುವ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಬೇಕು ಎಂದು ಅವರು ಕರೆ ನೀಡಿದ್ದಾರೆ.

SDPIKarnataka #SIR

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

2 weeks ago