ರಾಜ್ಯೋತ್ಸವವೆಂದರೆ ಕೇವಲ ಸಂಭ್ರಮದ ಆಚರಣೆಯಲ್ಲ; ನಾಡಿನ ಸಮಗ್ರ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂಕಲ್ಪವನ್ನು ಪುನರುಚ್ಚರಿಸುವ ದಿನ.
ಕರ್ನಾಟಕದ ಯುವಜನತೆಗೆ ಉದ್ಯೋಗ ಖಾತರಿ, ಸರ್ಕಾರಿ ಹಾಗೂ ಅರೆಸರ್ಕಾರಿ ವಲಯಗಳಲ್ಲಿ ಸ್ಥಳೀಯರಿಗೆ ಆದ್ಯತೆ ಮತ್ತು ಖಾಸಗಿ ವಲಯದಲ್ಲೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಬೇಕು.
ಕಟ್ಟಡಗಳ ನಿರ್ಮಾಣವಷ್ಟೇ ಅಭಿವೃದ್ಧಿಯಲ್ಲ; ಪ್ರತಿಯೊಬ್ಬ ಕನ್ನಡಿಗನಿಗೂ ಉದ್ಯೋಗ, ಗೌರವ, ಸಮಾನ ಅವಕಾಶ ಮತ್ತು ನ್ಯಾಯ ದೊರೆಯುವುದೇ ನಿಜವಾದ ಅಭಿವೃದ್ಧಿ.
ಬನ್ನಿ, ಕನ್ನಡ ನಾಡಿನ ಅಸ್ಮಿತೆಯನ್ನು ಎತ್ತಿಹಿಡಿದು, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದತೆಯ ಕರ್ನಾಟಕವನ್ನು ಕಟ್ಟೋಣ.
