15
Nov

ದಿನಾಂಕ 14/11/2026ರಂದು ಬೆಂಗಳೂರು ಪ್ರಧಾನ ಕಚೇರಿ ಯಲ್ಲಿ SDPI ಪಕ್ಷದ Political Affairs ಬೆಂಗಳೂರು ವಿಭಾಗೀಯ ಮಟ್ಟದ ಜಿಲ್ಲೆಗಳ ಸಭೆಯು ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸ‌ರ್ ಕೊಡ್ಲಿಪೇಟೆ ಯವರ ಸಮ್ಮುಖದಲ್ಲಿ ನಡೆಯಿತು.

ಸಭೆಯಲ್ಲಿ ರಾಜ್ಯ ಕೋಶಾಧಿಕಾರಿ ಅಮ್ಮದ್ ಖಾನ್ ಮೈಸೂರು ಹಾಗೂ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ಉಪಸ್ಥಿತರಿದ್ದರು.

ಬೆಂಗಳೂರು ಉತ್ತರ,ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಮೈಸೂರು, ಮಂಡ್ಯ, ಹಾಗೂ ಚಾಮರಾಜನಗರ ಜಿಲ್ಲೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಭಾಗದ ಜ್ವಲಂತ ಜನಸಮಸ್ಯೆಗಳು, ಪಕ್ಷದ ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂದಿನ ಜನಪರ ಹೋರಾಟಗಳ ರೂಪುರೇಷೆಗಳ ಕುರಿತು ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

Leave A Comment