ಜನಸಮಸ್ಯೆಗಳ ಪರಿಹಾರ ಮತ್ತು ಪಕ್ಷ ಸಂಘಟನೆ ಬಲವರ್ಧನೆಗೆ ಮಹತ್ವದ ನಿರ್ಧಾರಗಳು.
ನ. 22ರಂದು ವಿಜಯಪುರದ SDPI ಜಿಲ್ಲಾ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರ ಸಮ್ಮುಖದಲ್ಲಿ ಕಿತ್ತೂರು ಕರ್ನಾಟಕ ವಿಭಾಗದ Political Affairs ಸಭೆ ನಡೆಯಿತು. ರಾಜ್ಯ ಖಜಾಂಚಿ ಅಮ್ಮದ್ ಖಾನ್ ಮೈಸೂರು ಹಾಗೂ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಈ ಭಾಗದ ಜ್ವಲಂತ ಜನಸಮಸ್ಯೆಗಳು, ಪಕ್ಷ ಸಂಘಟನೆ, ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಸಿದ್ಧತೆ ಹಾಗೂ ಮುಂದಿನ ಜನಪರ ಹೋರಾಟಗಳ ಕುರಿತು ಚರ್ಚಿಸಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ವಿಜಯಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಐತಿಹಾಸಿಕ ಆದಿಲ್ ಶಾಹಿ ಹೆಸರಿಡುವಂತೆ ಸರ್ಕಾರವನ್ನು ಆಗ್ರಹಿಸಲಾಯಿತು. ರೈತರು, ಕಾರ್ಮಿಕರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟಿತ ಹೋರಾಟ ರೂಪಿಸಲು ನಿರ್ಧರಿಸಲಾಯಿತು
