ನವೆಂಬರ್ 25ರಂದು ಬೆಂಗಳೂರಿನ ಉರ್ದು ಹಾಲ್ನಲ್ಲಿ ನಡೆದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕೆಳಗಿನ ಮೂರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗಿದೆ:
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಂಪೂರ್ಣ ಬೆಂಬಲ
ಆಶಾ ಕಾರ್ಯಕರ್ತೆಯರು ಮಾಸಿಕ ₹15,000 ನಿಶ್ಚಿತ ಗೌರವಧನ, ಪ್ರತಿ ತಿಂಗಳ 10ರೊಳಗೆ ವೇತನ ಪಾವತಿ, ನಿವೃತ್ತಿಗೆ ₹5 ಲಕ್ಷ ನಿಧಿ, ಬಾಕಿ ಪ್ರೋತ್ಸಾಹಧನ ತಕ್ಷಣ ಬಿಡುಗಡೆ, ಗಂಭೀರ ಅನಾರೋಗ್ಯದಲ್ಲಿ 3 ತಿಂಗಳ ವೈದ್ಯಕೀಯ ರಜೆ ಹಾಗೂ ‘ಸಮಸ್ತ’ ಆ್ಯಪ್ನ ಕೆಲಸದ ಒತ್ತಡ ಕಡಿಮೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. SDPI ಅವರ ಎಲ್ಲಾ ಬೇಡಿಕೆಗಳಿಗೆ ಪೂರ್ಣ ಬೆಂಬಲ ವ್ಯಕ್ತಪಡಿಸುತ್ತಿದೆ. ರಾಜ್ಯ ಸರ್ಕಾರವು ಅವರೊಂದಿಗೆ ತಕ್ಷಣ ಮಾತುಕತೆ ನಡೆಸಿ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಭೆ ಆಗ್ರಹಿಸಿದೆ.
