27
Nov

01

ನವೆಂಬರ್ 25ರಂದು ಬೆಂಗಳೂರಿನ ಉರ್ದು ಹಾಲ್‌ನಲ್ಲಿ ನಡೆದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಈ ಕೆಳಗಿನ ಮೂರು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗಿದೆ:

ಡಿಸೆಂಬರ್ 10ರಂದು ‘ಬೆಳಗಾವಿ ಚಲೋ’ ಬೃಹತ್‌ ಪ್ರತಿಭಟನೆ

ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಗಮನ ಸೆಳೆಯಲು ಡಿಸೆಂಬರ್ 10ರಂದು ‘ಬೆಳಗಾವಿ ಚಲೋ’ ಹೋರಾಟವನ್ನು ಕೆಳಗಿನ ಬೇಡಿಕೆಗಳೊಂದಿಗೆ ಹಮ್ಮಿಕೊಳ್ಳಲು ನಿರ್ಣಯಿಸಲಾಗಿದೆ:

ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ತಕ್ಷಣ ಮರುಸ್ಥಾಪಿಸಿ ಶೇ. 8ಕ್ಕೆ ಹೆಚ್ಚಿಸಬೇಕು.

ಮಧುಸೂದನ್ ನಾಯಕ್ ಆಯೋಗದ ವರದಿಯ ಆಧಾರದ ಮೇಲೆ ಜಾತಿ ಜನಗಣತಿ ವರದಿಯನ್ನು ಶೀಘ್ರ ಬಿಡುಗಡೆ ಮಾಡಿ ಜಾರಿಗೊಳಿಸಬೇಕು.

ಉರ್ದು ಶಿಕ್ಷಕರ ನೇಮಕಾತಿಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಿ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು.

ಕಾಂಗ್ರೆಸ್ ಭರವಸೆ ನೀಡಿದ್ದ ಮತಾಂತರ ನಿಷೇಧ ಕಾಯ್ದೆ ಮತ್ತು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ಹಿಂಪಡೆಯಬೇಕು.

SDPIKarnataka

Leave A Comment