Categories: featureNewsPolitics

ಪತ್ರಿಕಾ ಪ್ರಕಟಣೆ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರೊ. ರಾಜಾಸಾಬ್ ಅವರಿಗೆ ಎಸ್‌ಡಿಪಿಐ ದಾವಣಗೆರೆ ಜಿಲ್ಲಾ ಸಮಿತಿಯಿಂದ ಸನ್ಮಾನ

2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ನವಿಲೇಹಾಳು ಗ್ರಾಮದ ಹೆಮ್ಮೆಯ ಪುತ್ರ ಪ್ರೊ. ಎ.ಎಚ್. ರಾಜಾಸಾಬ್‌ ಅವರನ್ನು ಎಸ್‌ಡಿಪಿಐ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಇಂದು ಅವರ ಸ್ವಗ್ರಾಮದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸ‌ರ್ ಕೊಡ್ಲಿಪೇಟೆ ಹಾಗೂ ಜಿಲ್ಲಾಧ್ಯಕ್ಷ ಎ.ಆರ್. ತಾಹೀರ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಇಸ್ಮಾಯಿಲ್ ಝಬಿಉಲ್ಲಾ, ನವೀದ್ ಅಹ್ಮದ್ ಮತ್ತು ಅಮೀರ್ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅಪ್ಸ‌ರ್ ಕೊಡ್ಲಿಪೇಟೆ, ಗ್ರಾಮೀಣ ಕೃಷಿಕ ಕುಟುಂಬದಲ್ಲಿ ಜನಿಸಿ, ಹಲವು ಸವಾಲುಗಳ ನಡುವೆಯೂ ಉನ್ನತ ಶಿಕ್ಷಣ ಪಡೆದು ಸಸ್ಯಶಾಸ್ತ್ರ ಕ್ಷೇತ್ರದಲ್ಲಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಪ್ರೊ. ರಾಜಾಸಾಬ್‌ ಅವರ ಸಾಧನೆ ಹೆಮ್ಮೆಯ ಸಂಗತಿ. ಮೂರು ದಶಕಗಳಿಗೂ ಅಧಿಕ ಕಾಲ ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ತುಮಕೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಹಾಗೂ ಪ್ರಸ್ತುತ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು. ಸನ್ಮಾನ ಸ್ವೀಕರಿಸಿದ ಪ್ರೊ. ರಾಜಾಸಾಬ್ ಅವರು ತಮ್ಮ ಸಾಧನೆಯನ್ನು ಗುರುತಿಸಿ ಗೌರವಿಸಿದ ಎಸ್‌ಡಿಪಿಐ ಮುಖಂ‌ಡರಿಗೆ ಕೃತಜ್ಞತೆ ಸಲ್ಲಿಸಿದರು. #SDPIKarnataka #Davangere

admin

Recent Posts

PRESS RELEASE

SDPI DAVANGERE DISTRICT COMMITTEE FELICITATES KARNATAKA RAJYOTSAVA AWARDEE PROF. A.H. RAJASAB The Social Democratic Party…

19 minutes ago

SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆಯ ನಿರ್ಣಯ 03

ನವೆಂಬರ್ 25ರಂದು ಬೆಂಗಳೂರಿನ ಉರ್ದು ಹಾಲ್‌ನಲ್ಲಿ ನಡೆದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ…

2 days ago

SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆಯ ನಿರ್ಣಯ 2

ನವೆಂಬರ್ 25ರಂದು ಬೆಂಗಳೂರಿನ ಉರ್ದು ಹಾಲ್‌ನಲ್ಲಿ ನಡೆದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ…

2 days ago

SDPI ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸಭೆಯ ನಿರ್ಣಯ

01 ನವೆಂಬರ್ 25ರಂದು ಬೆಂಗಳೂರಿನ ಉರ್ದು ಹಾಲ್‌ನಲ್ಲಿ ನಡೆದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ…

2 days ago

SDPI ತೀವ್ರವಾಗಿ ಖಂಡಿಸುತ್ತದೆ

ಉಜೈನ್‌ನಲ್ಲಿ ಐತಿಹಾಸಿಕ ಮಸೀದಿಗಳು ಮತ್ತು ದರ್ಗಾಗಳ ಧ್ವಂಸ.. ಇದು ಸಂವಿಧಾನಾತ್ಮಕ ಹಕ್ಕುಗಳ ಮೇಲಿನ ದಾಳಿಯಾಗಿದೆ. SDPI

2 days ago

ಸಮಾನತೆ, ಸೌಹಾರ್ದತೆ ಮತ್ತು ನ್ಯಾಯದ ಸಮಾಜ ನಿರ್ಮಾಣಕ್ಕೆ ಅವರ ಆದರ್ಶಗಳು ಸದಾ ದಾರಿದೀಪವಾಗಲಿ.

ಜಾತಿ-ಮತಗಳ ಭೇದಭಾವವನ್ನು ಮೀರಿ ಮಾನವೀಯತೆ ಮತ್ತು ಸಮಾನತೆಯ ಮೌಲ್ಯಗಳನ್ನು ಸಾರಿದ ಸಂತ ಕನಕದಾಸರ ಚಿಂತನೆಗಳು ಇಂದಿಗೂ ಸಮಾಜಕ್ಕೆ ಪ್ರೇರಣೆಯಾಗಿವೆ. ಸಮಾನತೆ,…

2 days ago