*ಸಾರಿಗೆ ನೌಕರರ ಬೇಡಿಕೆಗಳನ್ನು ಸರಕಾರ ತಕ್ಷಣ ಈಡೇರಿಸಬೇಕು – ಎಸ್ಡಿಪಿಐ*
ಸಾರಿಗೆ ಇಲಾಖೆಯ ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರಕಾರ ತಕ್ಷಣ ಈಡೇರಿಸುವಂತೆ *ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್* ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು ರಾಜ್ಯದಾದ್ಯಂತ ಸಾರಿಗೆ ನೌಕರರ ಆಂದೋಲನದಿಂದಾಗಿ ಸಾವಿರಾರು ಪ್ರಯಾಣಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಸಾಮಾನ್ಯ ಜನರ ದಿನನಿತ್ಯದ ಸಂಚಾರ ಅಸ್ತವ್ಯಸ್ತವಾಗಿದ್ದು, ವಿದ್ಯಾರ್ಥಿಗಳು, ಉದ್ಯೋಗಿಗಳು, ಆಸ್ಪತ್ರೆಗಳಿಗೆ ತೆರಳುವವರು ಸೇರಿದಂತೆ ಎಲ್ಲಾ ವರ್ಗದ ಜನರು ಮುಷ್ಕರದ ಪರಿಣಾಮ ಎದುರಿಸುತ್ತಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳು ದೀರ್ಘಕಾಲದಿಂದ ಬಾಕಿ ಉಳಿದಿವೆ. ಅವರ ಹಕ್ಕು, ಭದ್ರತೆ ಹಾಗೂ ವೇತನ ಸಂಬಂಧಿತ ಸಮಸ್ಯೆಗಳ ಬಗ್ಗೆ ಸರಕಾರ ನಿರ್ಲಕ್ಷ್ಯ ತೋರುತ್ತಿರುವುದು ವಿಷಾದನೀಯ. ಜನತೆಗೆ ತೊಂದರೆ ಉಂಟಾಗದಂತೆ ಸರಕಾರ ತಕ್ಷಣ ಕ್ರಮ ಕೈಗೊಂಡು ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿದ್ದಾರೆ.
ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಸಾರ್ವಜನಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದುದರಿಂದ ಸರಕಾರವು ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಸೂಕ್ತ ಸಂವಾದ ನಡೆಸಿ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಬೇಕು ಮತ್ತು ಅವರ ಬೇಡಿಕೆಗಳನ್ನು ಅರ್ಥಮಾಡಿಕೊಂಡು ಸಮನ್ವಯ ಸಾಧಿಸುವುದು ಆಡಳಿತ ಪಕ್ಷದ ಕರ್ತವ್ಯವಾಗಿದೆ ಎಂದು *ಬಿ. ಆರ್. ಭಾಸ್ಕರ್ ಪ್ರಸಾದ್* ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ
ದಿನಾಂಕ: 06,ಆಗಸ್ಟ್ 2025

*ಸಾರಿಗೆ ನೌಕರರ ಬೇಡಿಕೆಗಳನ್ನು ಸರಕಾರ ತಕ್ಷಣ ಈಡೇರಿಸಬೇಕು – ಎಸ್ಡಿಪಿಐ*

ಸಾರಿಗೆ ಇಲಾಖೆಯ ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರಕಾರ ತಕ್ಷಣ ಈಡೇರಿಸುವಂತೆ *ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್* ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು
ರಾಜ್ಯದಾದ್ಯಂತ ಸಾರಿಗೆ ನೌಕರರ ಆಂದೋಲನದಿಂದಾಗಿ ಸಾವಿರಾರು ಪ್ರಯಾಣಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಸಾಮಾನ್ಯ ಜನರ ದಿನನಿತ್ಯದ ಸಂಚಾರ ಅಸ್ತವ್ಯಸ್ತವಾಗಿದ್ದು, ವಿದ್ಯಾರ್ಥಿಗಳು, ಉದ್ಯೋಗಿಗಳು, ಆಸ್ಪತ್ರೆಗಳಿಗೆ ತೆರಳುವವರು ಸೇರಿದಂತೆ ಎಲ್ಲಾ ವರ್ಗದ ಜನರು ಮುಷ್ಕರದ ಪರಿಣಾಮ ಎದುರಿಸುತ್ತಿದ್ದಾರೆ.