ಸುಲೈಮಾನ HSS
ನಮ್ಮ ಪಕ್ಷದ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲೆಯ PI (ಮಂಗಳೂರು ಗ್ರಾಮಾಂತರ) ಸಾಲೆತ್ತೂರು ಕಟ್ಟತ್ತಿಲ ನಿವಾಸಿ ಸುಲೈಮಾನ್ HSS ರವರ ನಿಧನ ವಾರ್ತೆಯು ಅತೀವ ದುಃಖ ತಂದಿದೆ. ಸಾಮಾಜಿಕ ಕಳಕಳಿಯ ವ್ಯಕ್ತಿತ್ವ ಹೊಂದಿದ್ದ ಅವರು ಎಲ್ಲರೊಂದಿಗೆ ಆತ್ಮೀಯ ಒಡನಾಟ ಇಟ್ಟುಕೊಂಡಿದ್ದರು. ಪಕ್ಷದ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದರು. ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸುತ್ತಿದ್ದೇನೆ. ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೂ, ಬಂಧು ಮಿತ್ರರಿಗೂ, ಪಕ್ಷದ ಕಾರ್ಯಕರ್ತರಿಗೂ ಸೃಷ್ಟಿಕರ್ತನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್‌ಡಿಪಿಐ ಕರ್ನಾಟಕ