4 years ago

ದಿನಾಂಕ: 11.12.2022 ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷರಾದ ಬಾಳೇಕಾಯಿ ಶ್ರೀನಿವಾಸ್‌…

4 years ago

ನಿನ್ನೆ ಬೆಂಗಳೂರಿನಲ್ಲಿ ನಡೆದ ಒಳಮೀಸಲಾತಿ ಹೋರಾಟಗಾರರ ಬಂಧನ ಮತ್ತು ಲಾಠಿ ಚಾರ್ಜ್ ಖಂಡಿಸಿ‌, ಬೆಂಗಳೂರಿನಲ್ಲಿ ನಡೆಯುತ್ತಿರುವ ಒಳಮೀಸಲಾತಿ ಹೋರಾಟವನ್ನು ಬೆಂಬಲಿಸಿ, ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ…

ಒಳ ಮೀಸಲಾತಿ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಗೊಳಿಸಲು SDPI ಆಗ್ರಹ<br>ಬೆಂಗಳೂರು ಡಿಸೆಂಬರ್ -11;<br>ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಹೋರಾಟ ಗಾರರನ್ನು ಬಂಧಿಸಿದ ಬಿಜೆಪಿ ಸರಕಾರದ ಕ್ರಮ ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ. ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿ, ನ್ಯಾಯ ಕೊಡುವುದು ಬಿಟ್ಟು ಸರಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಇಳಿದಿರುವುದು ಖಂಡನಾರ್ಹ. ಮಾತ್ರವಲ್ಲ 62 ವರ್ಷ ಪ್ರಾಯದ ಹೋರಾಟಗಾರರೊಬ್ಬರ ತಲೆಗೆ ಪೊಲೀಸರು ಹಲ್ಲೆ ನಡೆಸಿ ಗಾಯಗೊಳಿಸಿರುವ ಕೃತ್ಯ ಪೊಲೀಸ್ ಇಲಾಖೆಯ ಮೂಲಕ ಸರಕಾರ ನಡೆಸುತ್ತಿರುವ ದರ್ಪವಾಗಿದೆ. ಸರಕಾರ ಕೂಡಲೇ ಹೋರಾಟಗಾರರ ಬೇಡಿಕೆಯನ್ನು ಪರಿಗಣಿಸಬೇಕು ಮತ್ತು ಈ ಕೂಡಲೇ ಬಂಧಿಸಿರುವವರನ್ನು ಬಿಡುಗಡೆಗೊಳಿಸ ಬೇಕೆಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

4 years ago