30
Jan
28
Jan

ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023
ಮೈಸೂರು ಗ್ರಾಮಾಂತರ ಜಿಲ್ಲೆ ಎಸ್‌ಡಿಪಿಐ ಪಕ್ಷದ ಚುನಾವಣಾ ಪೂರ್ವಭಾವಿ ಸಭೆ
ಮೈಸೂರು, 27 ಜನವರಿ 2023: ಮೈಸೂರು ಗ್ರಾಮಾಂತರ ಜಿಲ್ಲೆಯ ಚುನಾವಣಾ ಪೂರ್ವಭಾವಿ ಸಭೆಯು ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ವಿಧಾನಸಭಾ ಚುನಾವಣಾ ಉಸ್ತುವಾರಿಗಳಾದ ಅಪ್ಸ‌ರ್ ಕೊಡ್ಲಿಪೇಟೆ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಅಬ್ದುಲ್ ಮಜೀದ್ ತುಂಬೆ ಇವರ ಉಪಸ್ಥಿತಿಯಲ್ಲಿ ನಡೆಯತು. ಸಭೆಯಲ್ಲಿ ಸಂಭವನೀಯ ಅಭ್ಯರ್ಥಿಗಳ ಬಗ್ಗೆ ಚರ್ಚಿಸಿ ನಾಲ್ಕು ಅಭ್ಯರ್ಥಿಗಳ ಹೆಸರುಗಳನ್ನು ರಾಜ್ಯ ಸಮಿತಿಯ ಅನುಮೋದನೆಗಾಗಿ ಕಳಿಸಿಕೊಡಲು ತೀರ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅಪ್ಪ‌ರ್ ಕೊಡ್ಲಿಪೇಟೆ ಪಕ್ಷವನ್ನು ಬೂತ್ ಮಟ್ಟದಲ್ಲಿ ಬಲಪಡಿಸಲು ಕರೆ ನೀಡಿದರು. ಈಗಾಗಲೇ 54 ವಿಧಾನಸಭಾ ಕ್ಷೇತ್ರಗಳ ಪ್ರಥಮ ಪಟ್ಟಿಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿ ರವರು ಬಿಡುಗಡೆ ಮಾಡಿದ್ದು, ಶೀಘ್ರವೇ ರಾಜ್ಯ ಸಮಿತಿಯಿಂದ ದ್ವಿತೀಯ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಈ ಸಭೆಯಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಮಜಾಝ್ ಅಹಮದ್‌, ಪ್ರಧಾನ ಕಾರ್ಯದರ್ಶಿ ಸೈಯದ್ ಅಕ್ಬರ್ , ಸಂಘಟನಾ ಕಾರ್ಯದರ್ಶಿ ಲಿಯಾಕತ್ ಅಲಿ, ಹುಣಸೂರು ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಮುಸ್ತಫ ಖಾನ್ ಹಾಗೂ ನಗರಸಭಾ ಸದಸ್ಯರಾದ ಸೈಯದ್‌ ಯೂನುಸ್ ಪಾಲ್ಗೊಂಡಿದ್ದರು.

28
Jan

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪುಲಿಕೇಶಿನಗರದ ಅಭ್ಯರ್ಥಿ ಬಿ.ಆರ್. ಭಾಸ್ಕರ್ ಪ್ರಸಾದ್ ನೇತೃತ್ವದ ನಿಯೋಗ ಜನವರಿ 27, 2023ರಂದು ಈ ಕೆಳಗಿನ ಎರಡು ಮನವಿಗಳನ್ನು ಮಾಡಿಕೊಂಡಿದ್ದಾರೆ.
ಏಪ್ರಿಲ್ 14 ಅಂಬೇಡ್ಕರ್ ಜಯಂತಿ, ದೇಶದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕ‌ ಅವರ ಜಯಂತಿ ಆಚರಣೆಗೆ ಯಾವುದೇ ನೀತಿ ಸಂಹಿತೆ ತೊಡಕಾಗದಂತೆ ಚುನಾವಣಾ ದಿನಾಂಕಗಳ ಘೋಷಣೆಯನ್ನು ಅಂಬೇಡ್ಕರ್ ಜಯಂತಿಯ ನಂತರ ಘೋಷಣೆ ಮಾಡಬೇಕು.
ಚುನಾವಣೆ ಸಂದರ್ಭದಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಒದಗಿಸಲು ಕರ್ನಾಟಕದಲ್ಲಿ ಚುನಾವಣೆಗಳನ್ನು ಎರಡು ಹಂತಗಳಲ್ಲಿ ನಡೆಸಬೇಕು.
ಮನವಿ ಸ್ವೀಕರಿಸಿದ ಮೀನಾ ಅವರು, ಭಾರತದ ಮುಖ್ಯ ಚುನಾವಣಾಧಿಕಾರಿಗಳು ಚುನಾವಣೆಗೂ ಮುನ್ನ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಆ ಸಂದರ್ಭದಲ್ಲಿ ಎಲ್ಲರ ಕಡೆಯಿಂದ ಈ ಮನವಿ ಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ನಿಯೋಗದಲ್ಲಿ ಪಕ್ಷದ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮುಜಾಹಿದ್ ಪಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸಲೀಮ್, ಜಿಲ್ಲಾ ಕಾರ್ಯದರ್ಶಿ ಎಂ.ಕೆ. ಮೇತ್ರಿ ಅವರು ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

27
Jan
27
Jan
27
Jan
26
Jan
26
Jan

ಗಣರಾಜ್ಯ ದಿನದ ಆಚರಣೆಯ ಅಂಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ಇಂದು ಮೆಗಾ ರೋಡ್ ಶೋ ಹಮ್ಮಿಕೊಳ್ಳಲಾಯಿತು. ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು ಅವರ ನೇತೃತ್ವದಲ್ಲಿ ನಡೆದ ಈ ಮೆರವಣಿಗೆ ನಗರದ ಉದಯಗಿರಿಯಿಂದ ಕೆಸರೆವರೆಗೂ 300 ಅಡಿಗಳ ಭಾರತದ ಧ್ವಜವನ್ನು ಪ್ರದರ್ಶಿಸಲಾಯಿತು. ಈ ಮೆರವಣಿಗೆಯಲ್ಲಿ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಮೈಸೂರು ಜಿಲ್ಲಾಧ್ಯಕ್ಷರಾದ ರಫತ್‌ ಉಲ್ಲಾ ಖಾನ್, ಜಿಲ್ಲಾ ಉಪಾಧ್ಯಕ್ಷರಾದ ಎಸ್. ಸ್ವಾಮಿ, ರಾಜ್ಯ ಸಮಿತಿ ಸದಸ್ಯರಾದ ಮೌಲಾನಾ ನೂರುದ್ದೀನ್ ಫಾರೂಖಿ, ಅಮ್ಜದ್ ಖಾನ್, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಶಫಿ ಮುಂತಾದ ನಾಯಕರು ಭಾಗವಹಿಸಿದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನರಸಿಂಹರಾಜ ವಿಧಾನಸಭಾ ಕ್ಷೇತ್ರ