27
Oct

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಮೊತ್ತ ಏನಾಯ್ತು..?

ಶ್ವೇತ ಪತ್ರ ಹೊರಡಿಸಿ – ಎಸ್.ಡಿ.ಪಿ.ಐ 2025-26 ನೇ ಸಾಲಿನ ಬಜೆಟ್ಟಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ ಮೊತ್ತವನ್ನು ಮೀಸಲಿಟ್ಟು ಅನೇಕ ಯೋಜನೆಗಳನ್ನು ಘೋಷಿಸಿದರು. ಸದರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮೀಸಲಿಟ್ಟ ಮೊತ್ತವನ್ನು ಬಿಡುಗಡೆ ಮಾಡಿಲ್ಲದಿರುವುದು

*ಲದಾಖ್ ನ ರಕ್ತಪಾತ ಮೋದಿ ಸರ್ಕಾರದ ವಂಚನೆಯನ್ನು ಬಹಿರಂಗಗೊಳಿಸಿದೆ…,*

ಲದಾಖ್ ನಲ್ಲಿ ನಡೆಯುತ್ತಿರುವ ಶಾಂತಿಯುತ ಪ್ರತಿಭಟನೆಗಳ ಮೇಲೆ ಗುಂಡು ಹಾರಿಸಿ ನಾಲ್ಕು ಜನರ ಜೀವ ತೆಗೆದಿರುವ ಮೋದಿ ಆಡಳಿತದ ಕ್ರೌರ್ಯವನ್ನು ಸೋಶಿಯಲ್‌ ಡೆಮಾಕ್ರಟಿಲ್‌ ಪಾರ್ಟಿ ಆಫ್‌ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಕಿ ತೀವ್ರವಾಗಿ ಖಂಡಿಸಿದ್ದಾರೆ. ಈ ದಮನಕಾರಿ ಘಟನೆಯಲ್ಲಿ 70 ಕ್ಕಿಂತ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸ್ ಸಿಬ್ಬಂದಿಯೂ ಸಹ ಸೇರಿದ್ದಾರೆ. ಹಿಮಾಲಯ ತಪ್ಪಲಿನ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನ ನೀಡುವುದು, ಆರನೇ ಅನುಚ್ಚೇಧಕ್ಕೆ ಸೇರಿಸುವುದು, ಉದ್ಯೋಗದಲ್ಲಿ ಮೀಸಲಾತಿ, ಭೂಮಿ ಮತ್ತು ಸಾಂಸ್ಕೃತಿಕ ಗುರುತಿನ ರಕ್ಷಣೆಯ ನ್ಯಾಯಯುತ ಬೇಡಿಕೆಯೊಂದಿಗೆ ಪ್ರತಿಭಟಿಸುತ್ತಿದ್ದವರ ಮೇಲೆ ನಡೆದ ಈ ರಕ್ತಪಾತ ದಾಳಿ ರಾಜ್ಯದ ಜನರ ಹಕ್ಕುಗಳ ರಕ್ಷಣೆ ಮಾಡುವುದರಲ್ಲಿ ಸರ್ಕಾರ ಸಂಪೂರ್ಣವಾಗಿ ವೈಫಲ್ಯವನ್ನು ಕಂಡಿದೆ ಎಂದು ತೋರಿಸುತ್ತದೆ. ಈ ಎಲ್ಲಾ ಬೇಡಿಕೆಗಳು 2019 ರಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಏಕಪಕ್ಷೀಯವಾಗಿ ವಿಭಜಿಸಿದ ದಿನದಂದಲೇ ಉದ್ಭವಿಸಿವೆ.

ಮೋದಿ ಸರ್ಕಾರ ಎಸಗಿರುವ ಮಹಾ ವಂಚನೆ ಇಲ್ಲಿ ಬಹಳ ಸ್ಪಷ್ಟವಾಗಿದ್ದು, ಆರ್ಟಿಕಲ್ 370 ರದ್ದು ಪಡಿಸಿದ ನಂತರ ಅಭಿವೃದ್ದಿಯ ಭರವಸೆಯನ್ನು ನೀಡಲಾಗಿತ್ತಾದರೂ, ವಾಸ್ತವದಲ್ಲಿ ಸರ್ಕಾರದ ನಿರ್ಲಕ್ಷ್ಯ, ನಿರುದ್ಯೋಗದಲ್ಲಿ ಏರಿಕೆ ಮತ್ತು ಪರಿಸರದ ನಾಶ ಮಾತ್ರ ಕಂಡು ಬಂದಿದೆ. ಇದು ದೇಶದ ಉತ್ತರ  ತುದಿಭಾಗದ ರಾಜ್ಯದಲ್ಲಿ ತೀವ್ರ ಪರಿಣಾಮ ಬೀರಿದೆ. ಉನ್ನತ ಮಟ್ಟದ ಸಮಿತಿಯ ಮೂಲಕ ಅರ್ಥಪೂರ್ಣ ಸಂವಾದ ನಡೆಸಬೇಕಾಗಿದ್ದ ಸಮಯದಲ್ಲಿ, ಸರ್ಕಾರ ಆಶ್ರುವಾಯು, ಲಾಠಿ ಬೀಸುವಿಕೆ, ಬಲವಂತ ಕರ್ಫ್ಯೂ ಹೇರಿಕೆ ಮತ್ತು ಚಳುವಳಿಗಾರರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ಸುಳ್ಳು ಪ್ರಕರಣಗಳ ದಾಖಲಿಸುವಿಕೆ ಇತ್ಯಾದಿ ದಬ್ಬಾಳಿಕೆಗಳು ನಡೆದಿದೆ. ನ್ಯಾಯಯುತ ತಮ್ಮ ಬೇಡಿಕೆಗಳಿಗೆ 15 ದಿನಗಳಿಂದ ಸೋನಂ ವಾಂಗ್ಚುಕ್ ಅವರು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವಂತೆ ಮಾಡಿದ್ದಲ್ಲದೆ, ಗಲಭೆಗೆ ಅವರೇ ಕಾರಣ ಎಂದು ಅವರನ್ನು ದೂಷಿಸಲಾಗುತ್ತಿದೆ. ಇದು ಜನಪರ ಆಡಳಿತವಲ್ಲ,  ಇದು ಸರ್ವಾಧಿಕಾರಿ ಧೋರಣೆಯ ಪರಮಾವಧಿ.  ರೈತರ ಹೋರಾಟಗಳನ್ನು ಹತ್ತಿಕ್ಕುವುದರಿಂದ ಹಿಡಿದು, ಅಲ್ಪಸಂಖ್ಯಾತರ ದಮನದವರೆಗೆ ಈ ಆಡಳಿತದ ಧೋರಣೆ ಇದೇ ರೀತಿ ಮುಂದುವರೆದಿದೆ.

SDPI ಪಕ್ಷ ಲದಾಖ್ ಪ್ರದೇಶದ ಜನರ ಸಾಂವಿಧಾನಿಕ ಹಕ್ಕುಗಳ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ. ತನಿಖಾ ಸಂಸ್ಥೆಗಳ ದುರುಪಯೋಗ ಮತ್ತು ಒಡೆದು ಆಳುವ ರಾಜಕಾರಣದ ಭಾಗವಾದ, ಉದಾಹರಣೆಗೆ ವಕ್ಫ್ ತಿದ್ದುಪಡಿ ಮಸೂದೆ ಮತ್ತು ಹಿಂಸೆಯನ್ನು ಪೋಷಿಸುವ ಗೋ ರಕ್ಷಣಾ ನೀತಿಗಳು ದೇಶದಾದ್ಯಂತ ಶೋಷಿತ ಸಮುದಾಯಗಳನ್ನು ಇನ್ನಷ್ಟು ಮೂಲೆ ಗುಂಪು ಮಾಡಲು ಕಾರಣವಾಗುತ್ತಿವೆ.

ನ್ಯಾಯವನ್ನು ನಿರಾಕರಿಸುವ ಈ ರೀತಿಯ ದಮನಕಾರಿ ನೀತಿ ಭಾರತದ ಪ್ರಜಾಪ್ರಭುತ್ವದಲ್ಲಿ ತಲೆದೋರಿರುವ ಬಿಕ್ಕಟ್ಟನ್ನು ಮತ್ತಷ್ಟು ಆಳಕ್ಕೆ ತಗೆದುಕೊಂಡು ಹೋಗುತ್ತದೆ. ಆದುದರಿಂದ ಪ್ರಧಾನಿ ಮೋದಿ ತಕ್ಷಣ ಅಲ್ಲಿ ಮಾತುಕತೆ ಆರಂಭಿಸಿ ಅವರ ಪ್ರಮುಖ ಬೇಡಿಕೆಯಾದ ರಾಜ್ಯದ ಸ್ಥಾನಮಾನವನ್ನು ಪುನಃಸ್ಥಾಪಿಸುವುದಲ್ಲದೇ,  ಈ ದಮನ ನೀತಿಯನ್ನು ಅಂತ್ಯಗೊಳಿಸಬೇಕು ಎಂದು SDPI ಆಗ್ರಹಿಸುತ್ತದೆ.

ಪ್ಯಾಲೆಸ್ತೀನಿನ ರಕ್ತದ ಕಲೆಗಳಿಂದ ಬ್ರಿಟನ್ ಕೈ ತೊಳೆಯಲು ಸಾಧ್ಯವಿಲ್ಲ

ಬ್ರಿಟನ್, ಕೆನಡಾ ಮತ್ತು ಆಸ್ಟ್ರೇಲಿಯಾ ಇತ್ತೀಚೆಗೆ ಪ್ಯಾಲೆಸ್ಟೈನನ್ನು ರಾಷ್ಟ್ರವಾಗಿ ಗುರುತಿಸುವ ನಿರ್ಧಾರವನ್ನು ಪ್ರಕಟಿಸಿದ್ದು, ದಶಕಗಳ ಹಳೆಯ ಸಮಸ್ಯೆಗೆ “ಎರಡು ರಾಷ್ಟ್ರ ಪರಿಹಾರ” ಅಗತ್ಯವಿದೆ ಎಂದು ಹೇಳಿದ್ದಾರೆ. ಇಸ್ರೇಲ್ ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ ಹಿಂಸಾಚಾರಗಳು, ಈ

14
Sep

ಪತ್ರಿಕಾ ಪ್ರಕಟಣೆಗಾಗಿ

ಬದಲಾವಣೆ ಎಂದರೆ ಯಾರೋ ಒಬ್ಬ ನಾಯಕ ಬಂದು ಮಾಡುವ ಕೆಲಸವಲ್ಲ, ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ತನ್ನ ಕೊಡುಗೆಯನ್ನು ನೀಡಿದಾಗ ಮಾತ್ರ ಸಾಧ್ಯವಾಗುವ ಶಕ್ತಿ. ಅಪ್ಸರ್ ಕೊಡ್ಲಿಪೇಟೆ ಹೊಸಕೋಟೆ : ಸೆಪ್ಟೆಂಬರ್-11 :ಇಂದು ಹೊಸಕೋಟೆಯಲ್ಲಿ ನಡೆದ

11
Sep

ಪತ್ರಿಕಾ ಪ್ರಕಟಣೆ

ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ – ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು : ಸೆಪ್ಟೆಂಬರ್ :10:ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸುಮಾರು 95% ಮುಸ್ಲಿಂ ಸಮುದಾಯದ ಮತಗಳಿಂದ ಅಧಿಕಾರಕ್ಕೆ

79 ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

“ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ” ಭಿನ್ನತೆಗಳನ್ನು ಮೀರಿದ ಸಹೋದರತ್ವ, ನ್ಯಾಯದಿಂದ ತುಂಬಿದ ರಾಷ್ಟ್ರ, ಸ್ವಾತಂತ್ರ್ಯವನ್ನು ರಕ್ಷಿಸಿ, ಜನರ ಗೌರವವನ್ನು ಉಳಿಸೋಣ! ಶಾಹಿದಾ ತಸ್ನೀಮ್,ಉಪಾಧ್ಯಕ್ಷೆ, SDPI ಕರ್ನಾಟಕ SDPIKarnataka #happyindependenceday2025 #79thIndependenceDay

07
Aug

ಗುಜರಾತ್, ಬಿಹಾರದಲ್ಲಿ ಕುಸಿಯುತ್ತಿರುವ ಸೇತುವೆಗಳ ಡಿಪಿಆರ್ ಮಾಡಿದವರು ಯಾರು?: ಪ್ರತಾಪ್ ಸಿಂಹರಿಗೆ ಎಸ್‌ಡಿಪಿಐ ಟಾಂಗ್
ಆಗಸ್ಟ್ 06, 2025

ಮೈಸೂರು : ಸತತ 25 ವರ್ಷಗಳಿಂದ ಬಿಜೆಪಿ ಆಡಳಿತವಿರುವ ಗುಜರಾತ್ ರಾಜ್ಯದಲ್ಲಿ ಮತ್ತು ಬಿಜೆಪಿ, ಜೆಡಿಯು ಸಮ್ಮಿಶ್ರ ಸರ್ಕಾರವಿರುವ ಬಿಹಾರ ರಾಜ್ಯದಲ್ಲಿ ಸತತವಾಗಿ ಕುಸಿಯುತ್ತಿರುವ ಸೇತುವೆಗಳ ಡಿಪಿಆರ್ ಮಾಡಿದವರು ಯಾರು ಹೇಳು? ಎಂದು ಎಸ್‍ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಶ್ನಿಸುವ ಮೂಲಕ ಕೆಆರ್‍ಎಸ್ ಜಲಾಶಯಕ್ಕೆ ಟಿಪ್ಪು ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿಕೆ ಕುರಿತು, ಯಾವ ಮುಲ್ಲ ಡಿಪಿಆರ್ ಮಾಡಿಸಿದ್ದು ಎಂದು ಪ್ರಶ್ನಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಾಂಗ್ ನೀಡಿದರು.
ಮಹದೇವಪುರ ರಸ್ತೆಯಲ್ಲಿರುವ ಎಸ್‍ಡಿಪಿಐ ಕಚೇರಿಯಲ್ಲಿ ಬುಧವಾರ ಮದ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಾಪ್ ಸಿಂಹ ಒಬ್ಬ ದಡ್ಡ ಮತ್ತು ಮೂರ್ಖ, ಆತನಿಗೆ ಇತಿಹಾಸ ಗೊತ್ತಿಲ್ಲ, ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಕೆಆರ್‍ಎಸ್ ಜಲಾಶವನ್ನು ಟಿಪ್ಪು ಸುಲ್ತಾನ್ ಕಟ್ಟಿಸಿದ್ದು ಎಂದು ಎಲ್ಲೂ ಹೇಳಿಲ್ಲ, ಕಾವೇರಿ ನದಿಗೆ ಅಣೆಕಟ್ಟೆ ಕಟ್ಟುವ ಯೋಜನೆ ರೂಪಿಸಿ ಅದಕ್ಕೆ ಮೊದಲು ಅಡಿಗಲ್ಲು ಹಾಕಿಸಿದ್ದು ಟಿಪ್ಪು ಎಂದು ಹೇಳಿದ್ದಾರೆ ಅಷ್ಟೇ, ಈ ಶಾಸನವನ್ನು ಕೆಆರ್‍ಎಸ್ ಜಲಾಶಯ ಕಟ್ಟಿಸಿದ ಮಹಾತ್ಮರಾದ ನಾಲ್ವಡಿ ಕೃಷ್ಣರಾಜ ಪಡೆಯರ್ ಅವರೇ ಜಲಾಶಯದ ಬಳಿ ಟಿಪ್ಪು ಪರ್ಶಿಯನ್ ಭಾಷೆಯಲ್ಲಿ ಬರೆಸಿದ್ದ ಶಾಸನವನ್ನು ಕನ್ನಡದಲ್ಲಿ ಬರೆಸಿ ಜಲಾಶಯದ ಬಳಿಯೇ ಹಾಕಿಸುವ ಮೂಲಕ ತಮ್ಮ ದೊಡ್ಡತನವನ್ನು ಮೆರೆದಿದ್ದಾರೆ. ಆದರೇ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ಮಾತ್ರ ತಮ್ಮ ಬೌದ್ಧಿಕ ದಿವಾಳಿತನವನ್ನು ಪ್ರದರ್ಶಿಸಿದ್ದಾರೆ. ಗುಜರಾತ್ ರಾಜ್ಯದಲ್ಲಿ ಕಳೆದ 25 ವರ್ಷಗಳಿಂದಲೂ ಬಿಜೆಪಿ ಸರ್ಕಾರದ ಆಡಳಿತವೇ ಇದೆ. ಪ್ರಧಾನಿ ಮೋದಿಯವರು ಮೊದಲು ಗುಜರಾತ್ ಮುಖ್ಯಮಂತ್ರಿ ಆಗಿದ್ದವರು, ಆ ರಾಜ್ಯದಲ್ಲಿ ಎಷ್ಟು ಸೇತುವೆಗಳು ಕುಸಿದಿವೆ, ಎಷ್ಟೋಂದು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಅದೇ ರೀತಿ ಬಿಜೆಪಿ ಮತ್ತು ಜೆಡಿಯು ಸಮ್ಮಿಶ್ರ ಸರ್ಕಾರವಿರುವ ಬಿಹಾರದಲ್ಲಿಯೂ ಹತ್ತಾರು ಸೇತುವೆಗಳು ಕುಸಿದಿವೆ, ಅವುಗಳ ಡಿಪಿಆರ್ ಮಾಡಿದವರು ಯಾರು ಹೇಳು ನೋಡೋಣ? ಎಂದು ಖಾರವಾಗಿ ಪ್ರಶ್ನಿಸಿದರು.

ವಿಶ್ವವಿಖ್ಯಾತ ಆಗ್ರಾದ ತಾಜ್‍ಮಹಲ್, ದೆಹಲಿಯ ಕೆಂಪುಕೋಟೆ, ಕುತುಬ್ ಮಿನಾರ್, ಅಷ್ಟೇ ಏಕೆ ಕರ್ನಾಟಕದಲ್ಲಿರುವ ಗೋಲ್‍ಗುಂಬಜ್ ಕಟ್ಟಡಗಳ ಡಿಪಿಆರ್ ಮಾಡಿದವರು ಯಾರು ಎಂಬುದು ನಿನಗೆ ಗೊತ್ತಿದೆಯಾ? ನೀನೊಬ್ಬ ಮೂರ್ಖ ನಿನ್ನಂತೆ ಇರುವ ಮೂರ್ಖರು ಮಾತ್ರ ನಿನ್ನ ಮಾತಿಗೆ ಶಹಬ್ಬಾಸ್ ಹೇಳುತ್ತಾರೆ, ಬುದ್ಧಿವಂತರು ನಿನ್ನ ಮಾತಿಗೆ ಉಗಿಯುತ್ತಾರೆ ಎಂದು ಝಾಡಿಸಿದರು.

ಟಿಪ್ಪು ಸುಲ್ತಾನ್ ಮತ್ತು ಹೈದರ್ ಅಲಿಖಾನ್ ಅವರು ಈ ನಾಡಿನ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ನೀರಾವರಿ ಇಲ್ಲದ ಸಂದರ್ಭದಲ್ಲಿ ಚೀನಾದಿಂದ ರೇಷ್ಮೆ ಬೆಳೆಯನ್ನು ತರಿಸಿ ತನ್ನ ರಾಜ್ಯದಲ್ಲಿ ಅಭಿವೃದ್ಧಿಪಡಿಸಿದರು, ವಾಣಿಜ್ಯ ಬೆಳೆಗಳಿಗೆ ಪ್ರೋತ್ಸಾಹ ನೀಡಿದರು. 1782 ರಲ್ಲಿ ಟಿಪ್ಪು ಸುಲ್ತಾನ್ ಅವರು, ಕಾವೇರಿ ನದಿಗೆ 70 ಅಡಿ ಎತ್ತರದ ಅಣೆಕಟ್ಟೆ ಕಟ್ಟುವ ಮೂಲಕ ರೈತರ ಬದುಕು ಹಸನು ಮಾಡಲು ಯತ್ನಿಸಿ ಅದಕ್ಕೆ ಹಣಕಾಸು ಹೊಂದಿಸಿದ್ದರು, ಆದರೇ, 3ನೇ ಮೈಸೂರು ಆಂಗ್ಲೋ ಯುದ್ಧದಲ್ಲಿ ಟಿಪ್ಪು ಬ್ರಿಟೀಷರ ವಿರುದ್ಧ ಸೋಲು ಅನುಭವಿಸಿ ಯುದ್ಧದ ಖರ್ಚು 3 ಕೋಟಿ ಹಣವನ್ನು ಬ್ರಿಟಿಷರಿಗೆ ಕೊಡಲಾಗದೆ ತಮ್ಮ ಮಕ್ಕಳನ್ನು ಒತ್ತೆ ಇಟ್ಟಿದ್ದು ಯಾರೂ ಮರೆಯಲು ಸಾಧ್ಯವಿಲ್ಲ, ಬಳಿಕ ನಾಲ್ಕನೇ ಮೈಸೂರು-ಆಂಗ್ಲೋ ಯುದ್ಧದಲ್ಲಿ ಟಿಪ್ಪು ವೀರ ಮರಣ ಹೊಂದಿದಾಗ ಅಣೆಕಟ್ಟೆ ಕಟ್ಟಲು ಆಗುವುದಿಲ್ಲ, ಆದರೇ ರಾಜರ್ಷಿ ನಾಲ್ವಡಿ ಕೃಷ್ಣರಾಯ ಒಡೆಯರ್ ಅವರು ಕೆಆರ್‍ಎಸ್ ಜಲಾಶಯ ಕಟ್ಟುವ ಸಂದರ್ಭದಲ್ಲಿ ಸಿಕ್ಕ ಶಾಸನವನ್ನು ಅದೇ ಜಾಗದಲ್ಲಿ ಇರಿಸಿದ್ದರು. ನಿಮ್ಮಂತಹವರು ಏನಾದರೂ ಆಗ ಇದ್ದಿದ್ದರೆ ಆ ಶಾಸನವನ್ನು ಒಡೆದುಹಾಕುತ್ತಿದ್ದರು ಎಂದು ವ್ಯಂಗ್ಯವಾಡಿದರು.

ಟಿಪ್ಪು ಸುಲ್ತಾನ್ ತನ್ನ ರಾಜ್ಯದ ಒಟ್ಟು ಭೂಮಿಯ ಶೇ.30 ರಷ್ಟು ಭೂಮಿಗೆ ನೀರಾವರಿ ಸೌಲಭ್ಯ ಒದಗಿಸಿದ್ದರು, ಅವರು ತಮ್ಮ ರಾಜ್ಯದಲ್ಲಿ 40 ಸಾವಿರ ಕೆರೆ, ಕಟ್ಟೆಗಳನ್ನು ಕಟ್ಟಿಸಿದ್ದರು, ನೀನು 10 ವರ್ಷ ಎಂಪಿ ಆಗಿದ್ದೆ ಎಷ್ಟು ಕೆರೆಗಳನ್ನು ಕಟ್ಟಿಸಿದ್ದಿಯಾ ಅಥವಾ ಎಷ್ಟು ಕೆರೆಗಳ ಹೂಳು ಎತ್ತಿಸಿದ್ದೀಯಾ ಹೇಳು?

ಟಿಪ್ಪು ಸುಲ್ತಾನರ ಬಗ್ಗೆ ವ್ಯಂಗ್ಯವಾಗಿ ಮಾತನಾಡುವ ನೀನು ಮೈಸೂರು-ಕೊಡಗು ಜಿಲ್ಲೆಯಲ್ಲಿ 40-50 ವರ್ಷಗಳಿಂದ ಉಳುಮೆ ಮಾಡುತ್ತಿರುವ ಭೂ ರಹಿತರು ಅರ್ಜಿ ನಮೂನೆ 50, 53, 57 ರಲ್ಲಿ ತಮಗೆ ಭೂ ಒಡೆತನ ನೀಡುವಂತೆ ಸರ್ಕಾರಕ್ಕೆ 10 ವರ್ಷಗಳ ಹಿಂದೆಯೇ ಅರ್ಜಿ ಸಲ್ಲಿಸಿ ತಾಲ್ಲೂಕು ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಎಷ್ಟು ಜನರಿಗೆ ನೀನು ಭೂಮಿ ಕೊಡಿಸಿದ್ದೀಯಾ ಹೇಳು? ಟಿಪ್ಪು ಸುಲ್ತಾನರು ತಮ್ಮ ಆಳ್ವಿಕೆಯಲ್ಲೇ ಭೂ ರಹಿತ ದಲಿತರಿಗೆ, ಇತರರಿಗೆ ಭೂಮಿ ಒಡೆತನ ನೀಡಿದ್ದರು ಎನ್ನುವುದು ನಿನಗೆ ಗೊತ್ತಿಲ್ಲದಿದ್ದರೆ, ಇತಿಹಾಸ ಓದು ಎಂದು ಅಬ್ದುಲ್ ಮಜೀದ್ ಟಾಂಗ್ ನೀಡಿದರು.

1340ರಲ್ಲಿ ಹೊಯ್ಸಳರ ಕಾಲದಲ್ಲಿ ಮುಡುಕುತೋರೆ ಬಳಿ ಅಣೆಕಟ್ಟೆ ಕಟ್ಟಲಾಗಿತ್ತು, ಅದಕ್ಕೂ ಮುನ್ನ ಗಂಗರು ಪಾಂಡವಪುರದ ಬಳಿ ಅಣೆಕಟ್ಟೆ ಕಟ್ಟಿದ್ದಾರೆ. ಅದರ ಡಿಪಿಆರ್ ಕೇಳಲು ನಿನಗೆ ಆಗುತ್ತದೆಯಾ? ಪದೇ ಪದೇ ಟಿಪ್ಪು ಸುಲ್ತಾನರ ಅವಹೇಳನ ಸಲ್ಲದು, ಟಿಪ್ಪು ಒಬ್ಬ ಮುಸ್ಲಿಂ ದೊರೆ ಎಂದು ಬಿಜೆಪಿಯವರು ಅವರ ಅಭಿವೃದ್ಧಿ ಕಾರ್ಯಗಳನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಆದರೇ, ಇತಿಹಾಸವನ್ನು ಬದಲಾಯಿಸಲು ಅಸಾಧ್ಯ ಎಂದರು.

ಸುದ್ದಿಗೋಷ್ಠಿಯಲ್ಲಿ ಮೈಸೂರು ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಸ್ವಾಮಿ, ಮೈಸೂರು ಜಿಲ್ಲಾ ಎಸ್‍ಡಿಪಿಐ ಅಧ್ಯಕ್ಷ ರಫತ್ ಖಾನ್, ಫಿರ್ದೋಸ್, ಸಫಿಯುಲ್ಲಾ ಇದ್ದರು.

ಪತ್ರಿಕಾ ಪ್ರಕಟಣೆ
ದಿನಾಂಕ: 06,ಆಗಸ್ಟ್ 2025

*ಸಾರಿಗೆ ನೌಕರರ ಬೇಡಿಕೆಗಳನ್ನು ಸರಕಾರ ತಕ್ಷಣ ಈಡೇರಿಸಬೇಕು – ಎಸ್‌ಡಿಪಿಐ*

ಸಾರಿಗೆ ಇಲಾಖೆಯ ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರಕಾರ ತಕ್ಷಣ ಈಡೇರಿಸುವಂತೆ *ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್* ಪತ್ರಿಕಾ ಪ್ರಕಟಣೆಯಲ್ಲಿ  ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು
ರಾಜ್ಯದಾದ್ಯಂತ ಸಾರಿಗೆ ನೌಕರರ ಆಂದೋಲನದಿಂದಾಗಿ ಸಾವಿರಾರು ಪ್ರಯಾಣಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಸಾಮಾನ್ಯ ಜನರ ದಿನನಿತ್ಯದ ಸಂಚಾರ ಅಸ್ತವ್ಯಸ್ತವಾಗಿದ್ದು, ವಿದ್ಯಾರ್ಥಿಗಳು, ಉದ್ಯೋಗಿಗಳು, ಆಸ್ಪತ್ರೆಗಳಿಗೆ ತೆರಳುವವರು ಸೇರಿದಂತೆ ಎಲ್ಲಾ ವರ್ಗದ ಜನರು ಮುಷ್ಕರದ ಪರಿಣಾಮ ಎದುರಿಸುತ್ತಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳು ದೀರ್ಘಕಾಲದಿಂದ ಬಾಕಿ ಉಳಿದಿವೆ. ಅವರ ಹಕ್ಕು, ಭದ್ರತೆ ಹಾಗೂ ವೇತನ ಸಂಬಂಧಿತ ಸಮಸ್ಯೆಗಳ ಬಗ್ಗೆ ಸರಕಾರ ನಿರ್ಲಕ್ಷ್ಯ ತೋರುತ್ತಿರುವುದು ವಿಷಾದನೀಯ. ಜನತೆಗೆ ತೊಂದರೆ ಉಂಟಾಗದಂತೆ ಸರಕಾರ ತಕ್ಷಣ ಕ್ರಮ ಕೈಗೊಂಡು ನೌಕರರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಸಾರ್ವಜನಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಆದುದರಿಂದ ಸರಕಾರವು ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಸೂಕ್ತ ಸಂವಾದ ನಡೆಸಿ ಶೀಘ್ರದಲ್ಲಿ ಪರಿಹಾರ ಕಂಡುಕೊಳ್ಳಬೇಕು ಮತ್ತು ಅವರ ಬೇಡಿಕೆಗಳನ್ನು ಅರ್ಥಮಾಡಿಕೊಂಡು ಸಮನ್ವಯ ಸಾಧಿಸುವುದು ಆಡಳಿತ ಪಕ್ಷದ ಕರ್ತವ್ಯವಾಗಿದೆ ಎಂದು *ಬಿ. ಆರ್. ಭಾಸ್ಕರ್ ಪ್ರಸಾದ್* ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ

*ಸ್ಥಳೀಯ ಸಂಸ್ಥೆಗಳ ಆಡಳಿತವು ಪ್ರಜಾಪ್ರಭುತ್ವದ ಅಡಿಪಾಯ: ಆಯ್ಕೆಯಾದ ಪ್ರತಿನಿಧಿಗಳು ಕಾರ್ಯಕ್ಷಮತೆಯ ಮೂಲಕ ಪಕ್ಷವನ್ನು ‘Emerging to Power’ ದಿಕ್ಕಿಗೆ ಮುನ್ನಡೆಸಬೇಕು” – ಅಫ್ಸರ್ ಕೊಡ್ಲಿಪೇಟೆ*

*ಕಲ್ಯಾಣ ಕರ್ನಾಟಕ ಭಾಗದ ಎಸ್‌ಡಿಪಿಐ ಜನಪ್ರತಿನಿಧಿಗಳ ಸಭೆ*

*ಗುಲ್ಬರ್ಗ : 4 ಆಗಷ್ಟ್ 2025 –*

ಸ್ಥಳೀಯ ಸಂಸ್ಥೆಗಳ ಆಡಳಿತವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ ಎಂಬ ಘೋಷಣೆಯೊಂದಿಗೆ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ವ್ಯಾಪ್ತಿಯ ಎಸ್‌ಡಿಪಿಐ ಪಕ್ಷದ ಚುನಾಯಿತ ಜನಪ್ರತಿನಿಧಿಗಳ ಮೇಲುಸ್ತುವಾರಿಗಳ (ERM) ವಿಶೇಷ ಸಭೆ, ರಾಜ್ಯ ಪ್ರದಾನ ಕಾರ್ಯದರ್ಶಿ ಮತ್ತು ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಹಾಗೂ ರಾಜ್ಯ ERM ಉಸ್ತುವಾರಿ ಅಬ್ರಾರ್ ಅಹ್ಮದ್ ರವರ ನೇತೃತ್ವದಲ್ಲಿ ಗುಲ್ಬರ್ಗ ನಗರದಲ್ಲಿ ಜರುಗಿತು.

ಸಭೆಯಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಅಫ್ಸರ್ ಕೊಡ್ಲಿಪೇಟೆ ಅವರು, “ಪಕ್ಷದ ರಾಜಕೀಯ ಶಕ್ತಿ ಹಾಗೂ ಸಾರ್ವಜನಿಕ ಪ್ರಭಾವವನ್ನು ವಿಸ್ತರಿಸಲು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಮುಖವಾಗಿವೆ. ಈ ಹಿನ್ನಲೆಯಲ್ಲಿ, ಪಕ್ಷದ ಪರವಾಗಿ ಆಯ್ಕೆಯಾದ ಪ್ರತಿನಿಧಿಗಳು ರಾಜಕೀಯ ಬದ್ಧತೆ, ನೈತಿಕತೆ ಮತ್ತು ಕಾರ್ಯಕ್ಷಮತೆಯ ಮೂಲಕ ಪಕ್ಷವನ್ನು ‘Emerging to Power’ ದಿಕ್ಕಿಗೆ ಮುನ್ನಡೆಸುವಲ್ಲಿ ಪ್ರಮುಖ ಪಾತ್ರವಹಿಸಬೇಕಾಗಿದೆ,” ಎಂದು ಸೂಚಿಸಿದರು.

ಅಬ್ರಾರ್ ಅಹ್ಮದ್ ಮಾತನಾಡುತ್ತಾ, “ಪಕ್ಷದ ಪರವಾಗಿ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಳ್ಳಲು ನಿರಂತರ ತರಬೇತಿಗಳಲ್ಲಿ ಭಾಗವಹಿಸಿ ಉತ್ತಮ ಆಡಳಿತದ ಮಾದರಿಯನ್ನು ನೀಡಬೇಕು,” ಎಂದು ಸಲಹೆ ನೀಡಿದರು.

ಸಭೆಯಲ್ಲಿ ಪಾಲ್ಗೊಂಡ ಶಹಾಪುರ ನಗರಸಭಾ ಸದಸ್ಯೆ ಫಿರ್ದೋಸ್ ಖಾತೂನ್, ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು ಬಳ್ಳಾರಿ ಮತ್ತು ಬೀಜಾಪುರ ಜಿಲ್ಲೆಗಳ ವಿವಿಧ ಪಂಚಾಯಿತಿಗಳ ಸದಸ್ಯರು ಮತ್ತು ಚುನಾಯಿತ ಪ್ರತಿನಿಧಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತ, ಸ್ಥಳೀಯ ಮಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳು, ಸರಕಾರದ ಯೋಜನೆಗಳ ಅನುಷ್ಠಾನ ಹಾಗೂ ಜನರ ವಿಶ್ವಾಸ ಗಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಭೆ, ಪಕ್ಷದ ಜನಪರ ರಾಜಕೀಯ ಭದ್ರತೆಗಾಗಿ ದಿಕ್ಕು ತೋರಿದ ಹೆಜ್ಜೆಯಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗೆ ಬುನಾದಿ ಕಲ್ಪಿಸಿದೆ.

ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಹೀಮ್ ಪಟೇಲ್, ಗುಲ್ಬರ್ಗ ಜಿಲ್ಲಾಧ್ಯಕ್ಷರಾದ ಮೊಹಮ್ಮದ್ ಮೋಹಿಸಿನ್, ಯಾದಗಿರಿ ಜಿಲ್ಲಾಧ್ಯಕ್ಷರಾದ ಇಸಾಖ್  ಹುಸೇನ್, ಗುಲ್ಬರ್ಗ ಜಿಲ್ಲಾ ಕಾರ್ಯದರ್ಶಿ ಹಾಗೂ ERM ಉಸ್ತುವಾರಿ ಶಕೀಲ್ ಪಟೇಲ್ ಹಾಜರಿದ್ದರು.

28
Jul

ಗಾಜಾದಲ್ಲಿ ನರಮೇಧ ಮತ್ತು ಹಸಿವಿನಿಂದ ಆಗುತ್ತಿರುವ ಸಾವುಗಳ ವಿರುದ್ಧ ಕ್ರಮಕ್ಕೆ ಎಸ್‌ಡಿಪಿಐ ಒತ್ತಾಯ

ಗಾಜಾದಲ್ಲಿ ತೀವ್ರ ಹಸಿವಿನಿಂದ 85 ಮಕ್ಕಳೂ ಸೇರಿ 127 ಅಮಾಯಕ ಪ್ಯಾಲೆಸ್ಟೈನಿಯನ್ನರ ಸಾವಿನ ಬಗ್ಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಮೊಹಮ್ಮದ್ ಶಫಿ ಅವರು ತೀವ್ರ ದುಃಖ