Politics

ಎಸ್.ಡಿ.ಪಿ.ಐ ಮೈಸೂರು ಜಿಲ್ಲೆ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆ – 2023
ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ವತಿಯಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆಯನ್ನು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಚುನಾವಣಾ ತಂತ್ರ ಮತ್ತು ಬೂತ್ ಮಟ್ಟದಲ್ಲಿ ನಡೆಸಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.
ಕ್ಷೇತ್ರದ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಮೈಸೂರು ಅವರು ಸಮಾರೋಪ ಮಾತುಗಳನ್ನು ಆಡಿದರು. ಈ ಸಭೆಯಲ್ಲಿ ಮೈಸೂರು ಜಿಲ್ಲಾ ಅಧ್ಯಕ್ಷ ರಫತ್ ಉಲ್ಲಾ ಖಾನ್, ಜಿಲ್ಲಾ ಪಕ್ಷ ಸಂಘಟನಾ ಕಾರ್ಯದರ್ಶಿ ಆಕ್ರಂ, ಸಂಪನ್ಮೂಲ ವ್ಯಕ್ತಿಯಾಗಿ ಅಪ್ಸರ್ ಹುಣಸೂರು ಹಾಗೂ ಎಲ್ಲ ಬೂತ್ ಸಮಿತಿ ಉಸ್ತುವಾರಿಗಳು ಭಾಗವಹಿಸಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾಟಿ ಆಫ್ ಇಂಡಿಯಾ ಮೈಸೂರು

2 years ago

ಕರ್ನಾಟಕ ವಿಧಾನಸಭಾ ಚುನಾವಣೆ – 2023
ಹಾಸನ ಜಿಲ್ಲಾ ಚುನಾವಣಾ ಪೂರ್ವಭಾವಿ ಸಭೆ
ರಾಜ್ಯ ಚುನಾವಣಾ ಉಸ್ತುವಾರಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರ ನೇತೃತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಫ್ಸರ್ ಕೊಡ್ಲಿಪೇಟೆ ಅವರು ಈ ಕೆಳಗಿನ ಪ್ರಶ್ನೆಗಳನ್ನು ಸಭೆಯ ಮುಂದಿಟ್ಟು ಚರ್ಚೆ ನಡೆಸಿದರು.
2023 ಹಾಸನ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳ ರೇಸ್ ನಲ್ಲಿ ಒಬ್ಬೇ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಅಭ್ಯರ್ಥಿಯ ಹೆಸರಿದೆಯೇ? ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಬಂದ ನಂತರ ಅಲ್ಪಸಂಖ್ಯಾತರು ಕೇವಲ ಓಟ್ ಬ್ಯಾಂಕ್ ಆಗಿ ಮಾತ್ರ ಬಳಕೆಯಾಗಿರುವುದು ನಿಜವಲ್ಲವೇ? ಸ್ವಾಭಿಮಾನದ ರಾಜಕಾರಣಕ್ಕಾಗಿ ಎಸ್.ಡಿ.ಪಿ.ಐ ಪಕ್ಷ ಈ ಬಾರಿ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಸಮುದಾಯದ ಜನಪರ ಕಾಳಜಿ ಹೊಂದಿರುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ ಇದು ಸರಿಯೇ? ಹಾಗೇನಾದರೂ ಆದಲ್ಲಿ ಈ ಬಾರಿ ಹಾಸನ ಕ್ಷೇತ್ರದಲ್ಲಿ ಸಕಾರಾತ್ಮಕ ರಾಜಕಾರಣದ ಬದಲಾವಣೆಯ ಗಾಳಿ ಬೀಸುವ ಸಾಧ್ಯತೆ ಇದೆಯೇ? ಅಲ್ಪಸಂಖ್ಯಾತ, ದಲಿತ ಮತದಾರರು ಎಚ್ಚರಗೊಳ್ಳುವರೇ?

2 years ago