#SDPIKarnataka

ಮೈಸೂರು ನಗರದ ಪ್ರಮುಖ ಸಾಮಾಜಿಕ ಕಾರ್ಯಕರ್ತರು ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆ
ಮೈಸೂರು, 03 ಜನವರಿ 2023: ಮೈಸೂರು ನಗರದ ಖ್ಯಾತ ಸಾಮಾಜಿಕ ಕಾರ್ಯಕರ್ತರಾದ ಫೈಸಲ್ ಅಹಮದ್‌, ಮನ್ಸೂರ್‌ ಖಾನ್, ಬಹುಜನ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಸಲ್ಮಾ ಬಾನು ಮತ್ತು ಸಾಮಾಜಿಕ ಕಾರ್ಯಕರ್ತೆ ಜ್ಯೋತಿ ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಸದಸ್ಯತ್ವ ಪಡೆಯುವ ಮೂಲಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಜ್ಯದ ಅಧ್ಯಕ್ಷ ಅಬ್ದುಲ್‌ ಮಜೀದ್ ಅವರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಮಜೀದ್ ಅವರು, ಈ ನಾಲ್ವರೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಫೈಸಲ್ ಅಹಮದ್ ಅವರು ಈ ಹಿಂದೆ ಪಕ್ಷದಲ್ಲಿದ್ದರು ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ಪಕ್ಷದಿಂದ ದೂರವಿದ್ದರು. ಇದೀಗ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮನ್ಸೂ‌ರ್ ಖಾನ್ ಅವರು ಸಕ್ರಿಯ ಸಾಮಾಜಿಕ ಕಾರ್ಯಕರ್ತರು ಮತ್ತು ಸಲ್ಮಾ ಬಾನು ಅವರು ಬಹುಜನ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವವರು. ಜ್ಯೋತಿ ಮೇಡಂ ಶಿಕ್ಷಕಿ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿದ್ದಾರೆ. ಮೈಸೂರು ನಗರದ ಈ ನಾಲ್ವರು ಪ್ರಮುಖ ಸಮಾಜ ಸೇವಕರನ್ನು ನಾನು ಹೃತ್ತೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು. ಮೈಸೂರು ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಎಸ್‌ಡಿಪಿಐ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರೆಲ್ಲರೂ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಜೀದ್ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್, ಮೈಸೂರು ಜಿಲ್ಲಾಧ್ಯಕ್ಷ ರಫತ್‌ ಉಲ್ಲಾ ಖಾನ್, ಜಿಲ್ಲಾ ಸಮಿತಿ ಸದಸ್ಯ ಅಮ್ಮದ್‌ ಖಾನ್, ಜಿಲ್ಲಾ ಉಪಾಧ್ಯಕ್ಷ ಎಸ್‌.ಸ್ವಾಮಿ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ

2 years ago

ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪಟ್ಟಣದಲ್ಲಿ ರಾಜ್ಯ ಹೋಶಾಧಿಕಾರಿ ನೇತ್ರತ್ವದಲ್ಲಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಪಟ್ಟಣದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭ ಜಿಲ್ಲಾ ಉಸ್ತುವಾರಿ ಹಾಗೂ ಪಕ್ಷದ ರಾಜ್ಯ ಕೋಶಾಧಿಕಾರಿ ಸೈಯದ್‌ ಇಸಹಾಖ ಹುಸೇನ್‌ (ಖಾಲಿದ್) ಅವರ ನೇತ್ರತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕವಿತಾಳ ಪಟ್ಟಣದ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಮೊಹಮ್ಮದ್ ಫಯಾಜ್ ಹಾಗೂ ಉಪಾಧ್ಯಕರಾಗಿ ಚಾಂದ್ ಪಾಷಾ, ಕಾರ್ಯದರ್ಶಿಯಾಗಿ ಮುಸ್ತಫಾ, ಸಹಕಾರ್ಯದರ್ಶಿಯಾಗಿ ರಸೂಲ್, ಕೋಶಾಧಿಕಾರಿಯಾಗಿ ಮೊಹಮ್ಮದ್ ಅಮೀರ್ ಅಯ್ಕೆಯಾದರು.
ಈ ಸಮಾರಂಭದಲ್ಲಿ 50ಕ್ಕೂ ಹೆಚ್ಚು ಯುವಕರು ಮತ್ತು ಹಿರಿಯರು ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಕ್ಷದ ರಾಜ್ಯ ಕೋಶಾಧಿಕಾರಿ ಸೈಯದ್‌ ಇಸಹಾಖ ಹುಸೇನ್ (ಖಾಲಿದ್ ಅವರು ಮಾತನಾಡಿ, ಪಕ್ಷದ ಅಗತ್ಯತೆ ಮತ್ತು ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಇನ್ನೋರ್ವ ಅತಿಥಿ ಜಿಲ್ಲಾ ಸಮಿತಿ ಸದಸ್ಯರೂ ಆದ ಮೀರ್ ಅಲಿ ಅವರು ಪಕ್ಷದ ನಿಲುವಿನ ಕುರಿತು ವಿವರಿಸಿದರು. ಈ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ತಾಲೂಕು ಸಂಘಟನಾ ಕಾರ್ಯದರ್ಶಿಯಾದ ಜಿಲಾನಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಮೀರ ಅಲಿ ಅವರು ನೆರವೇರಿಸಿದರು.

2 years ago

ಪಿಲಿಯಾಪಟ್ಟಣದಲ್ಲಿರುವ ಸೆಂಟ್ ಮೇರಿಸ್ ಚರ್ಚ್ ಮೇಲೆ ದುಷ್ಕರ್ಮಿಗಳ ದಾಳಿ- ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ರವರ ನೇತೃತ್ವದಲ್ಲಿ ಎಸ್.ಡಿ.ಪಿ.ಐ. ನಿಯೋಗ ಸ್ಥಳಕ್ಕೆ ಭೇಟಿ ಪಿರಿಯಾಪಟ್ಟಣ ನಗರದ ಗೋಣಿಕೊಪ್ಪ ರಸ್ತೆಯಲ್ಲಿರುವ…

2 years ago